ಕಿಚ್ಚ ಸುದೀಪ್ ಅವರಿಗೆ ವಿಶೇಷ ಉಡುಗೊರೆ ಕೊಡಲಿದ್ದಾರೆ ವರ್ತೂರು ಸಂತೋಷ್

Updated on: Feb 08, 2024 | 9:56 PM

Varthur Santhosh: ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಬಿಗ್​ಬಾಸ್ ಮನೆಯಿಂದ ಹೊರ ಬಂದ ಬಳಿಕ ಒಳ್ಳೆಯ ಹವಾ ಎಬ್ಬಿಸಿದ್ದಾರೆ. ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ ಸಂತೋಷ್ ಅವರು ಅಣ್ಣನಿಗೆ ಕೊಡಲು ಬಯಸಿರುವ ಉಡುಗೊರೆಯ ಬಗ್ಗೆ ಹೇಳಿಕೊಂಡಿದ್ದಾರೆ.

ವರ್ತೂರು ಸಂತೋಷ್ (Varthur Santhosh), ಬಿಗ್​ಬಾಸ್ ಗೆಲ್ಲದಿದ್ದರೂ, ಬಿಗ್​ಬಾಸ್ ವಿನ್ನರ್​ಗಿಂತಲೂ ಹೆಚ್ಚು ಹವಾ ಎಬ್ಬಿಸಿದ್ದಾರೆ. ಬಿಗ್​ಬಾಸ್ ಮನೆಯಿಂದ ಹೊರಬಂದ ಕೂಡಲೇ ಅದ್ಧೂರಿ ಕಾರ್ಯಕ್ರಮ ಮಾಡಿ ಸ್ಪರ್ಧಿಗಳನ್ನೆಲ್ಲ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ವರ್ತೂರು ಸಂತು, ಹೊಸಕೋಟೆ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಅದ್ಧೂರಿಯಾ ಮೆರವಣಿಗೆಯನ್ನೂ ಮಾಡಿದ್ದಾರೆ. ಇಂದು (ಫೆಬ್ರವರಿ 08) ಸುದ್ದಿಗೋಷ್ಠಿ ನಡೆಸಿ ಮುಂದೆ ತಾವು ಆಯೋಜಿಸಲಿರುವ ಹಳ್ಳಿಕಾರ್ ರೇಸ್​ ಬಗ್ಗೆ ಕೆಲ ಮಾಹಿತಿಯನ್ನು ಹಂಚಿಕೊಂಡರು. ಈ ವೇಳೆ ಟಿವಿ9 ಜೊತೆ ಮಾತನಾಡಿದ ವರ್ತೂರು ಸಂತೋಷ್, ರೇಸ್​ಗೆ ಸುದೀಪ್ ಅವರನ್ನು ಅತಿಥಿಯಾಗಿ ಕರೆಯಲಿದ್ದೀನಿ. ಮಾತ್ರವಲ್ಲ ಅವರಿಗೆ ಹಳ್ಳಿಕಾರ್ ಎತ್ತುಗಳನ್ನು ಉಡುಗೊರೆಯಾಗಿ ಕೊಡುವ ಆಸೆಯಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More