Varthur Santhosh: ‘ಈಗ ಗೇಮ್​ ಸ್ಟಾರ್ಟ್​’: ಬಿಗ್​ ಬಾಸ್​ ಮನೆಯಲ್ಲಿ ಉಳಿಯಲು ನಿರ್ಧರಿಸಿದ ವರ್ತೂರು ಸಂತೋಷ್​

Updated on: Nov 14, 2023 | 9:00 AM

‘ನನ್ನಿಂದ ಇದು ಸಾಧ್ಯವಿಲ್ಲ’ ಎಂದು ಕಣ್ಣೀರು ಹಾಕಿದ ವರ್ತೂರು ಸಂತೋಷ್​ ಅವರು ನಂತರದಲ್ಲಿ ತಾಯಿಯ ಮಾತನ್ನು ಒಪ್ಪಿಕೊಂಡಿದ್ದಾರೆ. ದೊಡ್ಮನೆಯಿಂದ ಹೊರಗೆ ಹೋಗಬೇಕು ಎಂದುಕೊಂಡಿದ್ದ ಅವರ ನಿರ್ಧಾರ ಈಗ ಬದಲಾಗಿದೆ. ‘ಈಗ ಗೇಮ್​ ಸ್ಟಾರ್ಟ್​’ ಎಂದು ಹೊಸ ಉತ್ಸಾಹದಲ್ಲಿ ಅವರು ಆಟಕ್ಕೆ ಸಜ್ಜಾಗಿದ್ದಾರೆ.

ವರ್ತೂರು ಸಂತೋಷ್​ ಅವರು ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಮುಂದುವರಿಯತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ವರ್ತೂರು ಸಂತೋಷ್​ (Varthur Santhosh) ಅವರ ತಾಯಿ ದೊಡ್ಮನೆಯೊಳಗೆ ಕಾಲಿಟ್ಟು ಮಗನ ಮನಸ್ಸು ಬದಲಾಯಿಸಿದ್ದಾರೆ. ಆಟವನ್ನು ಅರ್ಧಕ್ಕೆ ನಿಲ್ಲಿಸಬಾರದು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲಿಗೆ ‘ನನ್ನಿಂದ ಇದು ಸಾಧ್ಯವಿಲ್ಲ’ ಎಂದು ಕಣ್ಣೀರು ಹಾಕಿದ ವರ್ತೂರು ಸಂತೋಷ್​ ಅವರು ನಂತರದಲ್ಲಿ ತಾಯಿಯ ಮಾತನ್ನು ಒಪ್ಪಿಕೊಂಡಿದ್ದಾರೆ. ದೊಡ್ಮನೆಯಿಂದ ಹೊರಗೆ ಹೋಗಬೇಕು ಎಂದುಕೊಂಡಿದ್ದ ಅವರ ನಿರ್ಧಾರ ಈಗ ಬದಲಾಗಿದೆ. ‘ಈಗ ಗೇಮ್​ ಸ್ಟಾರ್ಟ್​’ ಎಂದು ಹೊಸ ಉತ್ಸಾಹದಲ್ಲಿ ಅವರು ಆಟಕ್ಕೆ ಸಜ್ಜಾಗಿದ್ದಾರೆ. ಈ ಸಂದರ್ಭ ಹೇಗಿತ್ತು ಎಂಬುದನ್ನು ತಿಳಿಸುವ ಪ್ರೋಮೋ ಬಿಡುಗಡೆ ಆಗಿದೆ. ಈ ಸಂಚಿಕೆ ನ.14ರ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ದಲ್ಲಿ ಪ್ರಸಾರ ಆಗಲಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ (Jio Cinema) ಮೂಲಕ ಲೈವ್​ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More