ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ

Varthur Santhosh: ವರ್ತೂರು ಸಂತೋಷ್ ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಇದೀಗ ಅವರ ಮಾವ, ವರ್ತೂರು ಸಂತೋಷ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ
ವರ್ತೂರು ಸಂತೋಷ್

Updated on: Nov 18, 2023 | 11:34 PM

ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಬಿಗ್​ಬಾಸ್​ಗೆ ಬಂದ ಒಂದೇ ವಾರದಲ್ಲಿ ಹುಲಿ ಉಗುರು ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದರು. ಅದಾದ ಬಳಿಕ ಈಗ ಜಾಮೀನಿನ ಮೇಲೆ ಹೊರಬಂದು ಮತ್ತೆ ಬಿಗ್​ಬಾಸ್ ಮನೆ ಪ್ರವೇಶಿಸಿದ್ದಾರೆ. ಇದರ ನಡುವೆ ಈಗ ವರ್ತೂರು ಸಂತೋಷ್​ರ ಮಾವ ಸೋಮನಾಥ್, ವರ್ತೂರು ಸಂತೋಷ್ ತಮ್ಮ ಮಗಳಿಗೆ ಅನ್ಯಾಯ ಮಾಡಿದ್ದಾನೆ. ಮಗಳಿಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಸುದೀಪ್ ಅವರ ಬಳಿ ತಮಗೆ ಮದುವೆ ಆಗಿಲ್ಲ ಎಂದು ಸುಳ್ಳು ಹೇಳಿದ್ದಾನೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us