‘ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’; ವರ್ತೂರು ಸಂತೋಷ್​ಗೆ ತುಕಾಲಿ ಮನವಿ

Updated on: Nov 13, 2023 | 11:58 AM

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಹೊರ ಹೋಗಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಮನೆಯವರಿಗೆ ಬೇಸರ ಮೂಡಿಸಿದೆ. ಸುದೀಪ್ ಅವರು ವರ್ತೂರು ಸಂತೋಷ್ ಬಳಿ ಪರಿಪರಿಯಾಗಿ ಕೇಳಿಕೊಂಡರೂ ಅವರು ಇದಕ್ಕೆ ಒಪ್ಪುತ್ತಿಲ್ಲ.

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ (Varthur Santosh) ಅವರು ಹೊರ ಹೋಗಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಮನೆಯವರಿಗೆ ಬೇಸರ ಮೂಡಿಸಿದೆ. ಸುದೀಪ್ ಅವರು ವರ್ತೂರು ಸಂತೋಷ್ ಬಳಿ ಪರಿಪರಿಯಾಗಿ ಕೇಳಿಕೊಂಡರೂ ಅವರು ಇದಕ್ಕೆ ಒಪ್ಪುತ್ತಿಲ್ಲ. ವರ್ತೂರು ಸಂತೋಷ್ ಅವರ ಮನ ಒಲಿಸಲು ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಸುಷ್ಮಾ ರಾವ್ ಆಗಮಿಸಿದ್ದಾರೆ. ತುಕಾಲಿ ಸಂತೋಷ್ ಅವರು ವರ್ತೂರು ಬಳಿ ಹೋಗಿ ‘ಅಣ್ಣಾ ನಿನ್ನ ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’ ಎಂದು ಕೋರಿದ್ದಾರೆ. ಇದಕ್ಕೆ ವರ್ತೂರು ಅವರು ಒಪ್ಪಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More