ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ

Updated on: Sep 25, 2023 | 8:19 AM

ನಟ ವಸಿಷ್ಠ ಸಿಂಹ ಹಾಗೂ ಅವರ ಪತ್ನಿ ಹರಿಪ್ರಿಯಾ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಒಟ್ಟಾಗಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈಗ ಈ ಜೋಡಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು.

ನಟ ವಸಿಷ್ಠ ಸಿಂಹ (Vasishta Simha) ಹಾಗೂ ಅವರ ಪತ್ನಿ ಹರಿಪ್ರಿಯಾ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಒಟ್ಟಾಗಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈಗ ಈ ಜೋಡಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ಬಳಿಕ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಬ್ಬರೂ ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More