ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ

Updated on: Feb 17, 2025 | 10:49 AM

ಸ್ಯಾಂಡಲ್​ವುಡ್​ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಅವರು ಆಪ್ತ ಸ್ನೇಹಿತರು. ಡಾಲಿ ಧನಂಜಯ ವಿವಾಹಕ್ಕೆ ವಸಿಷ್ಠ ಸಿಂಹ ಹಾಜರಿ ಹಾಕಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗೆಳೆಯನಿಗೆ ಅವರು ಗೋಲ್ಡ್ ಚೈನ್ ಉಡುಗೊರೆ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ...

ನಟ ವಸಿಷ್ಠ ಸಿಂಹ ಮತ್ತು ಡಾಲಿ ಧನಂಜಯ ಅವರು ಆಪ್ತ ಗೆಳೆಯರು. ಡಾಲಿ ಧನಂಜಯ ಮದುವೆಗೆ ವಸಿಷ್ಠ ಸಿಂಹ ಆಗಮಿಸಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ನೇಹಿತನಿಗೆ ಅವರು ಬಂಗಾರದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಡಾಕ್ಟರ್​ ಧನ್ಯತಾ ಜೊತೆ ಡಾಲಿ ಧನಂಜಯ ಅವರ ಮದುವೆ ಮೈಸೂರಿನಲ್ಲಿ ಫೆ.16ರಂದು ನೆರವೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 17, 2025 10:45 AM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More