Loading video

ಅಪಾರ ಅನುಭವ ಇರುವ ದೇವೇಗೌಡ ಮತ್ತು ಕುಮಾರಸ್ವಾಮಿ ಪಕ್ಷದ ಅಧ್ಯಕ್ಷನನ್ನು ಆಯ್ಕೆ ಮಾಡುತ್ತಾರೆ: ಜಿಟಿ ದೇವೇಗೌಡ

|

Updated on: Jan 11, 2025 | 2:47 PM

ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡುವ ಪರಮಾಧಿಕಾರವನ್ನು ರಾಜ್ಯಪಾಲರಿಗೆ ನೀಡಿ ಕೇಂದ್ರ ಸರ್ಕಾರವು ಕಾಯ್ದೆಗೆ ತಿದ್ದುಪಡಿ ತಂದಿರುವ ಬಗ್ಗೆ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದ ಜಿಟಿ ದೇವೇಗೌಡರ ಗಮನಕ್ಕೆ ತಂದಾಗ ಅವರು ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಾರೆ. ತಾನಿನ್ನೂ ಸರ್ಕಾರದ ಆದೇಶ ನೋಡಿಲ್ಲ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಅನ್ನುತ್ತಾರೆ.

ಮೈಸೂರು: ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ತಮ್ಮ ಪಕ್ಷದ ಮುಂದಿನ ರಾಜ್ಯಾಧ್ಯಕ್ಷ ಯಾರಾಗಬೇಕು ಅನ್ನೋದಿಕ್ಕೆ ಸ್ಪಷ್ಟ ಅಭಿಪ್ರಾಯ ನೀಡಲಿಲ್ಲ. ಹೆಚ್ ಡಿ ದೇವೇಗೌಡ 92 ವರ್ಷದ ಹಿರಿಯ ಮುತ್ಸದ್ದಿಯಾಗಿದ್ದಾರೆ, ಅವರು ಜಯಪ್ರಕಾಶ್ ನಾರಾಯಣ ಜೊತೆ ಸೇರಿ ಕಟ್ಟಿದ ಪಕ್ಷವಿದು, ಹೆಚ್ ಡಿ ಕುಮಾರಸ್ವಾಮಿಯವರು ಸಹ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ, ಅವರಿಬ್ಬರೇ ಸೂಕ್ತ ವ್ಯಕ್ತಿಯನ್ನು ಆರಿಸುತ್ತಾರೆ ಎಂದು ಜಿಟಿಡಿ ಹೇಳಿದರು. ನಿಖಿಲ್ ಕುಮಾರಸ್ವಾಮಿಯ ಆಪ್ತ ಸ್ನೇಹಿತನಾಗಿರುವ ತನ್ನ ಮಗ ಅವರೇ ರಾಜ್ಯಾಧ್ಯಕ್ಷನಾಗಲಿ ಅಂತ ಹೇಳಿದರೆ ಅದರಲ್ಲಿ ತಪ್ಪೇನು ಬಂತು ಎಂದು ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು