‘ರಜನಿಕಾಂತ್ ತಮಿಳು ಪರ ಎಂದರೆ ರಾಜ್ಯಕ್ಕೆ ಕಾಲಿಡಕೂಡದು’; ವಾಟಾಳ್ ನಾಗರಾಜ್

Updated on: Sep 22, 2023 | 9:45 AM

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆಳವಣಿಗೆ ಬಗ್ಗೆ ಮಾತನಾಡಿರುವ ವಾಟಾಳ್ ನಾಗರಾಜ್​, ರಜನಿಕಾಂತ್ ಹಾಗೂ ತಮಿಳು ಸಿನಿಮಾಗಳ ವಿರುದ್ಧ ಕಿಡಿಕಾರಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕಕ್ಕೆ ಹಿನ್ನಡೆ ಆಗಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆಳವಣಿಗೆ ಬಗ್ಗೆ ಮಾತನಾಡಿರುವ ವಾಟಾಳ್ ನಾಗರಾಜ್​, ರಜನಿಕಾಂತ್ (Rajanikanth) ಹಾಗೂ ತಮಿಳು ಸಿನಿಮಾಗಳ ವಿರುದ್ಧ ಕಿಡಿಕಾರಿದ್ದಾರೆ. ‘ರಜನಿಕಾಂತ್ ಕರ್ನಾಟಕ ಪರವೋ ಅಥವಾ ತಮಿಳುನಾಡು ಪರವೋ ಎಂಬುದನ್ನು ಹೇಳಲಿ. ಒಂದೊಮ್ಮೆ ಅವರು ತಮಿಳುನಾಡುಪರ ಎಂದಾದರೆ ಅವರು ರಾಜ್ಯಕ್ಕೆ ಕಾಲಿಡೋದು ಬೇಡ. ತಮಿಳು ಸಿನಿಮಾಗಳು ಇಲ್ಲಿ ಪ್ರದರ್ಶನ ಕಾಣೋದು ಬೇಡ’ ಎಂದು ಅವರು ಹೇಳಿದ್ದಾರೆ. ಈ ಎಚ್ಚರಿಕೆ ಮುಂದಿನ ದಿನಗಳಲ್ಲಿ ರಿಲೀಸ್ ಆಗುವ ತಮಿಳು ಸಿನಿಮಾಗಳ ಮೇಲೆ ಪ್ರಭಾವ ಬೀರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 22, 2023 08:37 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More