ನಾಳೆ ಸಂಜೆಯೊಳಗೆ ಆಶಾ ಕಾರ್ಯಕರ್ತೆಯರ 15,000 ವೇತನ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

Updated on: Nov 23, 2026 | 8:15 PM

ಆರು ದಿನಗಳಿಂದ ತಮ್ಮ ಬೇಡಿಕೆಗಳಿಗಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ಸೂಚಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ಬೇಡಿಕೆ ಈಡೇರಿಸದಿದ್ದರೆ ಕನ್ನಡಪರ ಸಂಘಟನೆಗಳ ಜೊತೆ ಸೇರಿ ಬೀದಿಗಿಳಿದು ಭಾರಿ ಹೋರಾಟ ನಡೆಸುವುದಾಗಿ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ನ.23: ಕಳೆದ ಆರು ದಿನಗಳಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರತಿ ತಿಂಗಳು ಹದಿನೈದು ಸಾವಿರ ರೂಪಾಯಿ ವೇತನಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಆರು ದಿನಗಳಿಂದ ಮಳೆ, ಗಾಳಿ ಲೆಕ್ಕಿಸದೆ ಹೆಣ್ಣು ಮಕ್ಕಳು ಹೋರಾಟ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಜಪಾನ್ ಪ್ರವಾಸದಲ್ಲಿದ್ದು, ಮಂತ್ರಿಗಳು ಸಹ ಬುರುಡೆ ಮಾತುಗಳನ್ನು ಹೇಳುತ್ತಿದ್ದಾರೆ ಎಂದು ಟೀಕಿಸಿದರು. ಸ್ವಾತಂತ್ರ್ಯ ಉದ್ಯಾನವನದಲ್ಲಿ ಶೌಚಾಲಯ, ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳಿಲ್ಲದೆ ಹೋರಾಟ ನಡೆಯುತ್ತಿದ್ದು, ಇದು ನರಕಸದೃಶವಾಗಿದೆ ಎಂದು ಅವರು ಖಂಡಿಸಿದರು. ಕೂಡಲೇ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಬೇಕು. ನಾಳೆ ಸಂಜೆ ಒಳಗಾಗಿ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಸಮಗ್ರ ಕನ್ನಡಪರ ಸಂಘಟನೆಗಳೊಂದಿಗೆ ಬೀದಿಗಿಳಿದು ಭಾರಿ ಹೋರಾಟ ನಡೆಸುವುದಾಗಿ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More