Double whammy for sons: ಒಂದು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಪತಿಯನ್ನು ಜೊತೆಗೂಡಿದ ವೀಣಾ ಧ್ರುವನಾರಾಯಣ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ದರ್ಶನ್ ಹಾಗೂ ಇನ್ನೊಬ್ಬ ಮಗನನ್ನು ವೀಣಾ ಅಗಲಿದ್ದಾರೆ.
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮತ್ತು ಒಂದು ತಿಂಗಳಿಗೂ ಕಡಿಮೆ ಅವಧಿಗೆ ಮೊದಲು ಪತಿ ಆರ್ ಧ್ರುವನಾರಾಯಣ (R Dhruvanarayana) ಅವರನ್ನು ಕಳೆದುಕೊಂಡಿದ್ದ ವೀಣಾ ಧ್ರುವನಾರಾಯಣ (54) (Veena Dhruvanarayana) ಇಂದು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಮಾರ್ಚ್ 11 ರಂದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದರ್ಶನ್ (Darshan) ಹಾಗೂ ಇನ್ನೊಬ್ಬ ಮಗನನ್ನು ವೀಣಾ ಅಗಲಿದ್ದಾರೆ. ಕುಟಂಬದ ಮೂಲಗಳ ಪ್ರಕಾರ ಅವರ ಅಂತ್ಯಸಂಸ್ಕಾರ ಚಾಮರಾಜನಗರದಲ್ಲಿರುವ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಶುಕ್ರವಾರ ಸಾಯಂಕಾಲ ನಡೆಯಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos