ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪುತ್ರ ಶ್ರೀನಿವಾಸ್
ವಿಷ್ಣುವರ್ಧನ್ ಸ್ಮಾರಕ ವಿವಾದ: ವೀರಕಪುತ್ರ ಶ್ರೀನಿವಾಸ್ ಅವರು ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಅವರು ಈಗ ಒಂದು ವಿಚಾರವನ್ನು ರಿವೀಲ್ ಮಾಡಿದ್ದಾರೆ. ತಾವು ಮಾಡಿದ ಶಪಥ ಏನು ಎಂಬುದನ್ನು ಹೇಳಿದ್ದಾರೆ. ಆ ಬಗ್ಗೆ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ.
ವಿಷ್ಣುವರ್ಧನ್ (Vishnuvardhan) ಸ್ಮಾರಕ ವಿಚಾರದಲ್ಲಿ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ವಿಷ್ಣು ಅಭಿಮಾನಿ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾತನಾಡಿದ್ದಾರೆ. ‘ವಿಷ್ಣುವರ್ಧನ್ ಸ್ಮಾರಕ, ಭವನ, ಅವರ ನೆನಪಿನ ಕೆಲಸ ಪ್ರತಿ ಜಿಲ್ಲೆಯಲ್ಲೂ ಆಗಲಿ. ಅವರ ಪುಣ್ಯಭೂಮಿ ಅಭಿಮಾನ್ ಸ್ಟುಡಿಯೋದಲ್ಲಿ ಇರಲಿ ಎಂದು ಹೇಳಿದ್ದೆ. ಈಗಲೂ ಆ ಹೇಳಿಕೆಗೆ ಬದ್ಧ. ಕೆಂಗೇರಿ, ಉತ್ತರಹಳ್ಳಿ ಸೇರಿ ಎಲ್ಲ ಕಡೆ ಸ್ಮಾರಕ ಆಗಲಿ. ಎಂಬುದು ನನ್ನ ಆಶಯ. ಪುಣ್ಯಭೂಮಿ ವಿಚಾರಕ್ಕೆ ಒಂದು ತಾರ್ಕಿಕ ಅಂತ್ಯ ಕಾಣೋವರೆಗೆ ನಾನು ಮೈಸೂರಿನಲ್ಲಿರುವ ವಿಷ್ಣು ಸ್ಮಾರಕಕ್ಕೆ ಕಾಲಿಡುವುದಿಲ್ಲ ಎಂದು ಶಪಥ ಮಾಡಿದ್ದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

