AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡ್ರಿಗೆ ವೀರ ಮಾರ್ತಾಂಡ ಚಾವುಂಡರಾಯ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ದೇವೇಗೌಡ್ರಿಗೆ ವೀರ ಮಾರ್ತಾಂಡ ಚಾವುಂಡರಾಯ ಪ್ರಶಸ್ತಿ ಪ್ರದಾನ

ಮಂಜುನಾಥ ಕೆಬಿ
| Edited By: |

Updated on:Oct 18, 2026 | 6:46 PM

Share

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಅಂಬಿಕಾ ವಿದ್ಯಾಲಯವನ್ನು ದೇವೇಗೌಡ ಉದ್ಘಾಟಿಸಿದರು. ಈ ವೇಳೆ ಶ್ರವಣಬೆಳಗೊಳದ ದಿಗಂಬರ ಜೈನ ಮಠದಿಂದ ದೇವೇಗೌಡ್ರಿಗೆ ಜೈನಮಠದ ಸ್ವಸ್ತ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಿದರು.

ಹಾಸನ, (ಅಕ್ಟೋಬರ್ 18):ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಅಂಬಿಕಾ ವಿದ್ಯಾಲಯವನ್ನು ದೇವೇಗೌಡ ಉದ್ಘಾಟಿಸಿದರು. ಈ ವೇಳೆ ಶ್ರವಣಬೆಳಗೊಳದ ದಿಗಂಬರ ಜೈನ ಮಠದಿಂದ ದೇವೇಗೌಡ್ರಿಗೆ ಜೈನಮಠದ ಸ್ವಸ್ತ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಕಾರ್ಯಕ್ರಮದಲ್ಲಿ ಜೈನಮಠ ಶ್ರವಣಬೆಳಗೊಳದ ಚಾರೂಕೀರ್ತಿ ಭಟ್ಟಾರಕ ಮಹಾಸ್ವಾಮಿ ಹಾಗೂ ಜೈನಮಠ ಕನಕಗಿರಿಯ ಭುವನ ಕೀರ್ತಿ ಭಟ್ಟಾರಕ ಶ್ರಿಗಳು, ಮಾಜಿ ಸಚಿವ ಹೆಚ್‌.ಡಿ.ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 18, 2026 06:44 PM

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More