ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ
ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ತಮ್ಮ ಕುಟುಂಬ ಸಮೇತ ಮತದಾನ ಮಾಡಿದರು. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷವು ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದೆ ಎಂದು ಆರೋಪಿಸಿದರು. ಮತದಾರರು ಪ್ರಬುದ್ಧರಾಗಿದ್ದಾರೆ ಎಂದು ಹೇಳಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮನವಿ ಮಾಡಿದರು.
ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಬೀಡುಬಿಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಎಲ್ಲ ಯುವಕ, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..

