ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

Edited By:

Updated on: Apr 09, 2026 | 12:30 PM

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ತಮ್ಮ ಕುಟುಂಬ ಸಮೇತ ಮತದಾನ ಮಾಡಿದರು. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷವು ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದೆ ಎಂದು ಆರೋಪಿಸಿದರು. ಮತದಾರರು ಪ್ರಬುದ್ಧರಾಗಿದ್ದಾರೆ ಎಂದು ಹೇಳಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮನವಿ ಮಾಡಿದರು.

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಬೀಡುಬಿಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಎಲ್ಲ ಯುವಕ, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More