ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

Edited By:

Updated on: Mar 16, 2026 | 11:58 AM

ವೀರಣ್ಣ ಹಳೆಗೌಡರ ಅವರು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಸೇರಿರುವ ಅವರು, ಕಳೆದ 25 ವರ್ಷಗಳಿಂದ ಬಿಜೆಪಿಯಿಂದ ಬಾಗಲಕೋಟೆಯಲ್ಲಿ ಈ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ ಎಂದು ವಾದಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತನಗೆ ಒಂದು ಅವಕಾಶ ನೀಡಿದರೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಬಾಗಲಕೋಟೆಯಲ್ಲಿ 25 ವರ್ಷಗಳಿಂದ ಒಂದು ಸಾರಿಯೂ ಈ  ವರ್ಗಕ್ಕೆ ಅವಕಾಶ ಕೊಟ್ಟಿಲ್ಲ. ಎದುರಾಳಿ ಅಭ್ಯರ್ಥಿ ಕೂಡ ಕುರುಬ ಸಮುದಾಯದವರೇ ಆಗುವುದು ಬಹುತೇಕ ಫಿಕ್ಸ್​​ ಆಗಿದೆ. ಕುರುಬ ಸಮುದಾಯದ ಪರವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುವ ನಾನು, 2017ರಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವಾಗ್ವಾದ ಮಾಡಿ ಜೈಲಿಗೆ ಕೂಡ ಹೋಗಿ ಬಂದಿದ್ದೇನೆ. ನನ್ನಂತ ಒಬ್ಬ ಕಾರ್ಯಕರ್ತನಿಗೆ ಅವಕಾಶ ಒದಗಿಸಿ ಕೊಟ್ಟರೆ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಎಂದು ಆತ್ಮವಿಶ್ವಾಸವಿರೋದಾಗಿ ಟಿವಿ9ಗೆ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More