ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಬೆಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಬೆಂಗಳೂರು, (ಆಗಸ್ಟ್ 22): ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಪಕ್ಷದ ಒಟ್ಟೂ 54ಕ್ಕೂ ಹೆಚ್ಚು ಮಂದಿ ವೀರಶೈವ ಲಿಂಗಾಯತ ಶಾಸಕರು ಉಪಸ್ಥಿತಿತರಿದ್ದರು. ಇನ್ನು ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
