ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್: ಹೂವಿನ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ
ಚಿತ್ರದುರ್ಗದ ಚಳ್ಳಕೆರೆ ಶಾಸಕ ವೀರೇಂದ್ರ ಪಪ್ಪಿ, 4 ತಿಂಗಳ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕ ಹಿನ್ನೆಲೆ ಪಪ್ಪಿ ಬಿಡುಗಡೆಯಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಹೂವಿನ ಹಾರ ಹಾಕಿ, ಘೋಷಣೆ ಕೂಗಿ ಸ್ವಾಗತಿಸಿದರು.
ಬೆಂಗಳೂರು, ಡಿಸೆಂಬರ್ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ ಹಾರ ಹಾಕಿ ಬರಮಾಡಿಕೊಂಡರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.