ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ

Updated By: Ganapathi Sharma

Updated on: Jul 31, 2025 | 11:30 AM

ಅಂತೂ ಇಂತೂ ಕರ್ನಾಟಕದಲ್ಲಿ ಮತ್ತೆ ಟೋಯಿಂಗ್ ಶುರುವಾಗುವುದು ಖಚಿತವಾಗಿದೆ. ಆಗಸ್ಟ್ ತಿಂಗಳ ಅಂತ್ಯದಿಂದ ಟೋಯಿಂಗ್ ಆರಂಭಿಸಲಾಗುವುದು. ಈ ಬಾರಿ ಗುತ್ತಿಗೆ ನೀಡದೆ ಇಲಾಖೆಯೇ ಟೋಯಿಂಗ್ ನಿರ್ವಹಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ. ಟೋಯಿಂಗ್ ಕುರಿತ ಪರಮೇಶ್ವರ್ ಮಾತಿನ ವಿಡಿಯೋ ಇಲ್ಲಿದೆ.

ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಸರ್ಕಾರ ಈ ಹಿಂದೆಯೇ ಸುಳಿವು ನೀಡಿತ್ತು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ, ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಬಾರಿ ಗುತ್ತಿಗೆ ನೀಡುವುದಿಲ್ಲ, ಇಲಾಖೆಯಿಂದಲೇ ಟೋಯಿಂಗ್ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಪಾರ್ಕಿಂಗ್ ಸಮಸ್ಯೆ ತಲೆ ನೋವಾಗಿದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುವುದು. ಪೊಲೀಸರಿಗೆ ಜನರ ಜತೆ ಮಾನವೀಯತೆಯಿಂದ ವರ್ತಿಸಲು, ಶಾಂತಿಯಿಂದ ವರ್ತಿಸಲು ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ