Video: ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.ವರದಿಗಳ ಪ್ರಕಾರ, ಮೊದಲ ಘಟನೆ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ನಡೆದಿದೆ. ಪ್ರಯಾಣಿಕರು ಮೊದಲು ಪ್ಲಾಟ್‌ಫಾರ್ಮ್‌ನಲ್ಲಿ ಚಲಿಸುತ್ತಿರುವ ಕಾರನ್ನು ನೋಡಿದ್ದಾರೆ.
ಭೋಪಾಲ್, ಜುಲೈ 06: ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.ವರದಿಗಳ ಪ್ರಕಾರ, ಮೊದಲ ಘಟನೆ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ನಡೆದಿದೆ. ಪ್ರಯಾಣಿಕರು ಮೊದಲು ಪ್ಲಾಟ್‌ಫಾರ್ಮ್‌ನಲ್ಲಿ ಚಲಿಸುತ್ತಿರುವ ಕಾರನ್ನು ನೋಡಿದ್ದಾರೆ.
ಎರಡನೇ ಘಟನೆಯಲ್ಲಿ, ಯುವಕನೊಬ್ಬ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ಸ್ಕೂಟಿ ಓಡಿಸುತ್ತಿರುವುದು ಕಂಡುಬಂದಿದೆ. ಪ್ರಯಾಣಿಕರು ಎರಡೂ ಘಟನೆಗಳನ್ನು ಸೆರೆಹಿಡಿದಿದ್ದಾರೆ, ಆದರೆ ಅದೃಷ್ಟವಶಾತ್ ಯಾವುದೇ ಅಪಘಾತ ಸಂಭವಿಸಲಿಲ್ಲ. ಆ ಸಮಯದಲ್ಲಿ ಯಾವುದೇ ರೈಲುಗಳು ಇರಲಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ರಕ್ಷಣಾ ಪಡೆಯ ಎಸ್‌ಎಚ್‌ಒ ಮನೀಶ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ರೈಲ್ವೆ ಹಳಿ ಮೇಲೆ ಮಹಿಳೆಯೊಬ್ಬಳು ಕಾರಿ ಓಡಿಸಿರುವ ವಿಡಿಯೋ ವೈರಲ್ ಆಗಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ