Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ

Updated on: Jul 06, 2025 | 1:04 PM

ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್​ಫಾರ್ಮ್​ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.ವರದಿಗಳ ಪ್ರಕಾರ, ಮೊದಲ ಘಟನೆ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ನಡೆದಿದೆ. ಪ್ರಯಾಣಿಕರು ಮೊದಲು ಪ್ಲಾಟ್‌ಫಾರ್ಮ್‌ನಲ್ಲಿ ಚಲಿಸುತ್ತಿರುವ ಕಾರನ್ನು ನೋಡಿದ್ದಾರೆ.

ಭೋಪಾಲ್, ಜುಲೈ 06: ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್​ಫಾರ್ಮ್​ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.ವರದಿಗಳ ಪ್ರಕಾರ, ಮೊದಲ ಘಟನೆ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ನಡೆದಿದೆ. ಪ್ರಯಾಣಿಕರು ಮೊದಲು ಪ್ಲಾಟ್‌ಫಾರ್ಮ್‌ನಲ್ಲಿ ಚಲಿಸುತ್ತಿರುವ ಕಾರನ್ನು ನೋಡಿದ್ದಾರೆ.

ಎರಡನೇ ಘಟನೆಯಲ್ಲಿ, ಯುವಕನೊಬ್ಬ ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ಸ್ಕೂಟಿ ಓಡಿಸುತ್ತಿರುವುದು ಕಂಡುಬಂದಿದೆ. ಪ್ರಯಾಣಿಕರು ಎರಡೂ ಘಟನೆಗಳನ್ನು ಸೆರೆಹಿಡಿದಿದ್ದಾರೆ, ಆದರೆ ಅದೃಷ್ಟವಶಾತ್ ಯಾವುದೇ ಅಪಘಾತ ಸಂಭವಿಸಲಿಲ್ಲ. ಆ ಸಮಯದಲ್ಲಿ ಯಾವುದೇ ರೈಲುಗಳು ಇರಲಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ರಕ್ಷಣಾ ಪಡೆಯ ಎಸ್‌ಎಚ್‌ಒ ಮನೀಶ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ರೈಲ್ವೆ ಹಳಿ ಮೇಲೆ ಮಹಿಳೆಯೊಬ್ಬಳು ಕಾರಿ ಓಡಿಸಿರುವ ವಿಡಿಯೋ ವೈರಲ್ ಆಗಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More