ಪ್ರವಾಹದಲ್ಲಿ ಕೊಚ್ಚಿಹೋಗಿ ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಭಯಾನಕ ಮೇಘಸ್ಫೋಟದ ಪರಿಣಾಮ ನೋಡಿ

Updated on: Apr 21, 2025 | 8:17 AM

Jammu Kashmir cloudburst video; ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟ, ಮಳೆ, ಪ್ರವಾಹದಲ್ಲಿ ಹತ್ತಾರು ವಾಹನಗಳಿಗೆ ಹಾನಿಯಾಗಿದೆ. ಕಾರು, ಟಿಟಿ ಹಾಗೂ ಇತರ ಕೆಲವು ವಾಹನಗಳು ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, ಅಲ್ಲಲ್ಲಿ ಕೆಸರಿನಲ್ಲಿ ಹೂತಿರುವುದ ಕಂಡುಬಂದಿದೆ. ನೂರಾರು ಮನೆಗಳಿಗೂ ಹಾನಿಯಾಗಿವೆ. ರಣಭೀಕರ ದೃಶ್ಯದ ವಿಡಿಯೋ ಇಲ್ಲಿದೆ.

ಶ್ರೀನಗರ, ಏಪ್ರಿಲ್ 21: ಅಲ್ಲಲ್ಲಿ ಕುಸಿದು ಬಿದ್ದಿರುವ ಕಟ್ಟಡಗಳು, ನೀರಿನಲ್ಲಿ ತೇಲಿಹೋಗಿ ಕೆಸರಿನಲ್ಲಿ ಹೂತಿರುವ ಕಾರು, ಟಿಟಿ ಹಾಗೂ ಟೆಂಪೋಗಳು, ಇಂಥ ರಣಭೀಕರ ಸನ್ನಿವೇಶಕ್ಕೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆ ಭಾನುವಾರ ಸಾಕ್ಷಿಯಾಯಿತು. ಭಾರಿ ಮೇಘಸ್ಫೋಟ, ಮಳೆ, ಪ್ರವಾಹದ ಪರಿಣಾಮ ಮೂವರು ಮೃತಪಟ್ಟಿದ್ದು, ನೂರಾರು ಜನ ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹದಿಂದ ಉಂಟಾದ ಅವಾಂತರದ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More