ಕೋಲಾರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭಾರೀ ಮಳೆ, ಮರಗಳು ರಸ್ತೆಗೆ ಉರುಳಿ ವಾಹನ ಸಂಚಾರ ಅಸ್ತವ್ಯಸ್ತ
ಜಿಲ್ಲೆಯ ಬಂಗಾರಪೇಟೆ ಮತ್ತು ಇತರ ಪ್ರದೇಶಗಳಲ್ಲೂ ಜೋರುಗಾಳಿ ಸಹಿತ ಮಳೆಯಾಗಿದೆ. ಪಟ್ಟಣದ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಸೇಟ್ ಕಂಪೌಂಡ್ ಮತ್ತು ಗಂಗಮ್ಮನ ಪಾಳ್ಯದಲ್ಲಿ ಕೊಳಚೆ ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿದೆ, ರಸ್ತೆಗಳಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರ ಮತ್ತು ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ.
ಕೋಲಾರ, ಆಗಸ್ಟ್ 9: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಮತ್ತು ಜೋರುಗಾಳಿ (thunder showers) ಹಲವು ಅವಾಂತರಗಳನ್ನು ಸೃಷ್ಟಿಸಿದೆ. ನಮ್ಮ ವರದಿಗಾರ ನೀಡುವ ಮಾಹಿತಿಯ ಪ್ರಕಾರ ಕೋಲಾರ-ಟೇಕಲ್ ರಸ್ತೆಯಲ್ಲಿ ಮಳೆ ಮತ್ತು ಗಾಳಿಯಿಂದಾಗಿ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನಗಳ ಸಂಚಾರಕ್ಕೆ ಭಾರೀ ಅಡಚನಣೆಯುಂಟಾಗಿದೆ. ಬಸ್ಸು ಮತ್ತು ಕಾರುಗಳಂಥ ವಾಹನಗಳು ಸಂಚರಿಸವುದು ಸಾಧ್ಯವೇ ಇಲ್ಲ. ಎಡಭಾಗದಲ್ಲಿ ಕೊಂಚ ಸ್ಥಳವಿದೆ, ದ್ವಿಚಕ್ರ ವಾಹನಗಳು ಅಲ್ಲಿಂದ ರಸ್ತೆಯ ಮತ್ತೊಂದು ಭಾಗಕ್ಕೆ ಬರುತ್ತಿವೆ. ಕೆಎಸ್ಆರ್ಟಿಸಿ ಬಸ್ಸೊಂದರ ಚಾಲಕ ಮತ್ತು ನಿರ್ವಾಹಕ ಮರಬಿದ್ದ ಸ್ಥಳವನ್ನು ಅಸಹಾಯಕರಾಗಿ ವೀಕ್ಷಿಸುತ್ತಿದ್ದಾರೆ.
ಇದನ್ನೂ ಓದಿ: Video: ಪುಟ್‌ಪಾತ್‌ನಲ್ಲೇ ಅಡುಗೆ ಮಾಡುತ್ತಿರುವ ವ್ಯಕ್ತಿ, ಮಳೆಯಿಂದ ಒಲೆ ಆರದಿರಲು ಹಲಗೆ ಹಿಡಿದು ನಿಂತ ಪುಟಾಣಿಗಳು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

