ಬೆಳಗಾವಿ: ಜಲಾವೃತವಾದ ಸೇತುವೆ ಮೇಲೆ ವಾಹನ ಸಂಚಾರ; ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ್

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 07, 2024 | 5:46 PM

ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಅವಾಂತರಗಳನ್ನು ಸೃಷ್ಟಿ ಮಾಡಿದೆ. ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಜನರು ಡೋಂಟ್​ಕೇರ್​ ಎನ್ನುತ್ತಿದ್ದಾರೆ. ಇತ್ತ ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಬೆಳಗಾವಿ, ಜು.07: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ವರ್ಷಧಾರೆ ಹಿನ್ನೆಲೆ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಜನರು ಡೋಂಟ್​ಕೇರ್​ ಎನ್ನುತ್ತಿದ್ದಾರೆ. ಹೌದು, ಜಲಾವೃತವಾದ ಸೇತುವೆಯಲ್ಲೇ ವಾಹನ ಸಂಚಾರ ಮಾಡುತ್ತಿದ್ದು, ಜನರು ಓಡಾಟ ನಡೆಸುತ್ತಿದ್ದಾರೆ.  ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More