ಜಯಮಾಲಾ ಮಗಳ ಹಳದಿಶಾಸ್ತ್ರ ಸಂಭ್ರಮ; ಸ್ಯಾಂಡಲ್​ವುಡ್ ತಾರೆಯರು ಭಾಗಿ

Updated on: Feb 05, 2025 | 10:21 PM

ಹಿರಿಯ ನಟಿ ಜಯಮಾಲಾ ಮಗಳು ಸೌಂದರ್ಯ ಜಯಮಾಲಾ ಮದುವೆಗೆ ದಿನಗಣನೆ ಶುರುವಾಗಿದೆ. ಇದೆ ತಿಂಗಳ 7 ಮತ್ತು 8ರಂದು ವಿವಾಹ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈಗಾಗಲೇ ಜಯಮಾಲಾ ಮನೆಯಲ್ಲಿ ಮದುವೆ ಶಾಸ್ತ್ರಗಳು ಶುರುವಾಗಿವೆ. ಈ ಕ್ಷಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಹಿರಿಯ ನಟಿ ಜಯಮಾಲಾ ಅವರ ಮಗಳು ಸೌಂದರ್ಯಾ ವಿವಾಹ ಫೆಬ್ರವರಿ 7 ಹಾಗೂ 8ರಂದು ಅದ್ದೂರಿಯಾಗಿ ಜರುಗಲಿದೆ. ಇಂದು (ಫೆಬ್ರವರಿ 5) ಅದ್ದೂರಿಯಾಗಿ ಹಳದಿ ಶಾಸ್ತ್ರ ನಡೆದಿದೆ. ನಗರದ ಲಲಿತ್ ಅಶೋಕ್ ಹೋಟೆಲ್​ನಲ್ಲಿ ಹಳದಿ ಶಾಸ್ತ್ರ ಜರುಗಿದೆ. ಇದರಲ್ಲಿ ಸ್ಯಾಂಡಲ್ವುಡ್ ತಾರೆಯರು ಪಾಲ್ಗೊಂಡಿದ್ದರು. ಸುಧಾರಾಣಿ, ಶ್ರುತಿ, ಮಾಳವಿಕಾ ಮೊದಲಾದವರು ಭಾಗಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More