ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ, ಡಿಸಿಎಂ ಭಾಗಿ
ಶತಾಯುಷಿ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ. ಕರ್ನಾಟಕ ಏಕೀಕರಣ ಹೋರಾಟದ ಪ್ರಮುಖ ನಾಯಕ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯಾಗಿದ್ದ ಇವರು, ವೀರಶೈವ ಲಿಂಗಾಯುತ ಸಮುದಾಯದ ಹಿರಿಯ ಮುಖಂಡರಾಗಿದ್ದರು. ಸರಳ, ಸ್ವಾಭಿಮಾನಿ ರಾಜಕಾರಣದ ಜೊತೆಗೆ ಶಿಕ್ಷಣ ಮತ್ತು ಸಹಕಾರ ಕ್ಷೇತ್ರಗಳಿಗೂ ಕೊಡುಗೆ ನೀಡಿದ್ದರು.
ಬೀದರ್, ಜನವರಿ 17: ಜಿಲ್ಲೆ ಭಾಲ್ಕಿಯ ಚಿಕಲ್ ಚೆಂದ ರಸ್ತೆಯ ಜಮೀನಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಪಂಚಭೂತಗಳಲ್ಲಿ ಲೀನರಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಉನ್ನತ ರಾಜಕೀಯ ಗಣ್ಯರು, ಮುಖಂಡರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 17, 2026 10:21 PM
