ಕನ್ನಡಿಗರ ಬೇಡಿಕೆ ಫಲಿಸಿದ ಕ್ಷಣ; ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸರಳವಾದ ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಪತ್ನಿ ಗಾಯತ್ರಿ, ಮಗಳು ಹಾಗೂ ಅಳಿಯ ಸಂತೋಷದಿಂದ ಚಪ್ಪಾಳೆ ತಟ್ಟುತ್ತಾ ಅಭಿನಂದಿಸಿದರು. ಅನಂತ್ ನಾಗ್ 5 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟರಾಗಿ ಅಭಿನಯಿಸುತ್ತಿದ್ದಾರೆ.
ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸರಳವಾದ ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಪತ್ನಿ ಗಾಯತ್ರಿ, ಮಗಳು ಹಾಗೂ ಅಳಿಯ ಸಂತೋಷದಿಂದ ಚಪ್ಪಾಳೆ ತಟ್ಟುತ್ತಾ ಅಭಿನಂದಿಸಿದರು. ಅನಂತ್ ನಾಗ್ 5 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟರಾಗಿ ಅಭಿನಯಿಸುತ್ತಿದ್ದಾರೆ. ಚಿತ್ರರಂಗ ಮಾತ್ರವಲ್ಲದೆ ರಾಜಕೀಯಕ್ಕೂ ಪದಾರ್ಪಣೆ ಮಾಡಿದ್ದ ಅನಂತ್ ನಾಗ್ ಕರ್ನಾಟಕದಿಂದ ಎಂಎಲ್ಎ ಹಾಗೂ ಎಂಎಲ್ಸಿಯಾಗಿಯೂ ಆಯ್ಕೆಯಾಗಿದ್ದರು. ಕಲಾ ರಂಗದಲ್ಲಿ ಅನಂತ್ ನಾಗ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ