‘ಕಲಿಯುಗದ ಕುಡುಕ’ನ ಪಯಣ ಅಂತ್ಯ: ಶೂಟಿಂಗ್​​ ನಲ್ಲಿದ್ದಾಗಲೇ ದುರಂತ ಸಾವು

Updated on: Oct 13, 2025 | 7:07 PM

ಕಾಮಿಡಿ ಸ್ಟಾರ್ ನಟ, ರಂಗಕರ್ಮಿ ರಾಜು ತಾಳಿಕೋಟೆ (59) ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ ಬಂದಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಕಾಮಿಡಿ ಸ್ಟಾರ್, ರಂಗಕರ್ಮಿ ರಾಜು ತಾಳಿಕೋಟೆ (60) ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ ಬಂದಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.