ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಹಿರಿಯ ನಟ ಅನಂತ್ ನಾಗ್ ನೇರ ಮಾತು
ಐದು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಕಲಾ ಪಯಣ, ರಂಗಭೂಮಿ, ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿನ ಅನುಭವ ಹಾಗೂ ಚಿತ್ರರಂಗದ ಸಹಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದ ಅನಂತ್ ನಾಗ್, ಈ ಪ್ರಶಸ್ತಿಯನ್ನು ತಮ್ಮೊಬ್ಬರ ಸಾಧನೆಗಿಂತಲೂ ತಮ್ಮೊಂದಿಗೆ ಕೆಲಸ ಮಾಡಿದ ಎಲ್ಲರಿಗೂ ಸಮರ್ಪಿಸಿದ್ದಾರೆ. ಇನ್ನು ಪ್ರಶಸ್ತಿ ಸ್ವೀಕರಿಸದ ಸಂದರ್ಭವನ್ನು ಅನಂತ್ ನಾಗ್ ಟಿವಿ9 ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಬಾಲ್ಯದಿಂದ ಹಿಡಿದು ತಮ್ಮ ಜೀವನದ ಯಶೋಗಾಥೆ ಬಗ್ಗೆಯೂ ಎಳೆ ಎಳೆಯಾಗಿ ಹೇಳಿಕೊಂಡಿದ್ದು, ಇದೇ ವೇಳೆ ಪ್ರಸ್ತುತ ರಾಜಕೀಯ ವ್ಯವಸ್ಥೆ ಬಗ್ಗೆಯೂ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಮೇರು ನಟ, ತಮ್ಮ ಸಹಜ ಅಭಿನಯದಿಂದ ಕೋಟ್ಯಂತರ ಕನ್ನಡಿಗರ ಮನ ಗೆದ್ದಿರುವ ಅನಂತ್ ನಾಗ್ ಅವರು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ ಪಡೆದುಕೊಂಡಿದ್ದಾರೆ. ಮೊನ್ನೇ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.