AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ರಾಮು, ಆನೇಕಲ್​
| Edited By: |

Updated on: Mar 21, 2026 | 4:49 PM

Share

ಶಿವಮೊಗ್ಗದ ವನ್ಯಜೀವಿ ಕೇಂದ್ರದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಕುರಿತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕಾಡು ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಸಮೀಕ್ಷಾ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಿಪ್ಪೋ ಸಮೀಪಕ್ಕೆ ಹೋಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಹಿಪ್ಪೋ ಬಳಿ ಅನುಭವವಿಲ್ಲದ ಯುವತಿಯನ್ನು ಕಳುಹಿಸಿದ್ದು ಸಾಮಾನ್ಯ ಜ್ಞಾನವಿಲ್ಲದ ಕೆಲಸ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮೃತ ಸಮೀಕ್ಷಾ ಮಾವ ನವೀನ್ ಆಗ್ರಹಿಸಿದ್ದಾರೆ.

ಆನೇಕಲ್, ಮಾರ್ಚ್​ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು. ಮದುವೆ ಮಾಡಿಕೊಳ್ಳುವ ಯೋಚನೆ ಕೂಡ ಸಮೀಕ್ಷಾಗೆ ಇರಲಿಲ್ಲ. ಅಧಿಕಾರಿಗಳೇ ಹಾಸ್ಟೆಲ್ ಬಳಿ ಜೀಪ್ ಕಳುಹಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಇಬ್ಬರು ಯುವತಿಯರನ್ನ ಜೊತೆಗೆ ಕಳಿಸಿದ್ದಾರೆ. ಒಬ್ಬ ಹುಡುಗಿಯನ್ನು ನೀರಾನೆ ಬಳಿ ಕಳಿಸಲು ಕಾಮನ್​ಸೆನ್ಸ್ ಬೇಕು. 20 ಸಿಂಹಗಳು ಸಹ ಒಂದು ನೀರಾನೆ ಸಮೀಪ ಹೋಗಲ್ಲ, ಅದರಲ್ಲೂ ನೀರಾನೆ ಗರ್ಭಿಣಿ ಇದ್ದು ಭಯ ಇರುತ್ತೆ. ವೈಲ್ಡ್‌ಲೈಫ್ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us