AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​: ವಿಡಿಯೋ ವೈರಲ್

ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​: ವಿಡಿಯೋ ವೈರಲ್

ಪ್ರಸನ್ನ ಹೆಗಡೆ
|

Updated on:Jul 01, 2026 | 4:01 PM

Share

CP Radhakrishnan: ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ತಮ್ಮ 'ಬಾಸ್' ಎಂದು ಕರೆದಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ತಮಿಳುನಾಡು ಉಸ್ತುವಾರಿಯಾಗಿ ಸಿ.ಟಿ. ರವಿ ಅವರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರ ಜೊತೆ ತಾನು ಕೆಲಸ ಮಾಡಿದ್ದೆ ಎಂಬುದನ್ನು ಅವರು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

ಬೆಂಗಳೂರು, ಜುಲೈ 01: ಜೂನ್​​ 27ರಂದು ಬೆಂಗಳೂರಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​ ತಮ್ಮ ಭಾಷಣದ ವೇಳೆ ವಿಧಾನ ಪರಿಷತ್​​ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ತಮ್ಮ ಬಾಸ್​​ ಎಂದು ಹೇಳಿರುವ ವಿಡಿಯೋ ಭಾರಿ ವೈರಲ್​​ ಆಗಿದೆ. ತಮಿಳುನಾಡು ಉಸ್ತುವಾರಿಯಾಗಿ ಸಿ.ಟಿ. ರವಿ ಅವರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರ ಜೊತೆ ತಾನು ಕೆಲಸ ಮಾಡಿದ್ದೆ. ಹಳೆಯದೋ, ಈಗಿನದೋ ಆದರೆ ಬಾಸ್​​ ಯಾವಾಗಲೂ ಬಾಸ್​​ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 01, 2026 03:42 PM

Follow Us