ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

| Updated By: ವಿವೇಕ ಬಿರಾದಾರ

Updated on: Oct 26, 2024 | 10:48 AM

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಮನೆಗೆ ಇಂದು (ಅ.26) ಉಪರಾಷ್ಟ್ರಪತಿ ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರ ಮನೆಗೆ ಇಂದು (ಅ.26) ಉಪರಾಷ್ಟ್ರಪತಿ ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ.

ಶುಕ್ರವಾರ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on