AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 17, 2026 | 12:12 PM

Share

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್‌ ತಮ್ಮ ಹುದ್ದೆಗಾಗಿ ಗೃಹ ಸಚಿವರಿಗೆ 50 ಲಕ್ಷ ಲಂಚ ನೀಡಿದ್ದೇನೆ ಎಂದು ಹೇಳಿದ್ದು, ತಮ್ಮಿಂದ 25 ಲಕ್ಷ ರೂಪಾಯಿ ಅಥವಾ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆಂದು ಸಂತ್ರಸ್ತೆ ದೂರಿದ್ದಾರೆ. ಗಂಡನ ಮೇಲೆ ರೌಡಿಶೀಟರ್ ಹಾಕುವ ಬೆದರಿಕೆ ಹಾಕಿ, 50,000 ರೂಪಾಯಿ ವಸೂಲಿ ಮಾಡಿರೋದಾಗಿ ತಿಳಿಸಿದ್ದಾರೆ.

ಮಂಗಳೂರು, ಮಾರ್ಚ್​​ 17: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ  ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪತಿಯ ಮೇಲೆ ರೌಡಿಶೀಟರ್ ಹಾಕಿ ಬಂಧಿಸುವ ಬೆದರಿಕೆ ಹಾಕಿ ಲಂಚ ಹಾಗೂ ಲೈಂಗಿಕ ಕಿರುಕುಳಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿರುವ ಮಹಿಳೆ, ಇನ್ಸ್‌ಪೆಕ್ಟರ್ ಸಂದೇಶ್‌ ಅವರು ತಮ್ಮ ಹುದ್ದೆಗೆ ಬರಲು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ್ದಾರೆಂದು ಹೇಳಿಕೊಂಡಿದ್ದಾರೆ. ಹೀಗಾಗಿ 25 ಲಕ್ಷ ರೂಪಾಯಿ ನೀಡವ ಅಥವಾ ಲೈಂಗಿಕ ಸಂಪರ್ಕಕ್ಕೆ ಒಪ್ಪುವ ಆಯ್ಕೆಯನ್ನು ಅವರು ತನಗೆ ನೀಡಿದ್ದು, 50,000 ರೂಪಾಯಿ ಹಣವನ್ನು ಈಗಾಗಲೇ ವಸೂಲಿ ಮಾಡಿರೋದಾಗಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More