ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ

Updated on: Jan 18, 2026 | 12:22 PM

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ದೇಶವು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸುತ್ತಿದೆ.

ಅಸ್ಸಾಂ, ಜನವರಿ 18: ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ದೇಶವು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸುತ್ತಿದೆ ಎಂದರು.

ಮುಂಬೈನಲ್ಲಿ ಕಾಂಗ್ರೆಸ್​ ಈಗ ನಾಲ್ಕನೇ ಅಥವಾ ಐದನೇ ಸ್ಥಾನದಲ್ಲಿರುವ ಪಕ್ಷವಾಗಿದೆ. ಕಾಂಗ್ರೆಸ್ ವರ್ಷಗಳ ಕಾಲ ಆಳ್ವಿಕೆ ನಡೆಸಿದ ಮಹಾರಾಷ್ಟ್ರವು ಸಂಪೂರ್ಣ ಹಾಳಾಗಿದೆ. ಕಾಂಗ್ರೆಸ್ ರಾಷ್ಟ್ರದ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಯಾವುದೇ ಅಭಿವೃದ್ಧಿ ಕಾರ್ಯಸೂಚಿಯನ್ನು ಹೊಂದಿಲ್ಲ. ಅಂತಹ ಕಾಂಗ್ರೆಸ್ ಅಸ್ಸಾಂಗೆ ಅಥವಾ ಕಾಜಿರಂಗಕ್ಕೆ ಎಂದಿಗೂ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ.

ಬಿಜೆಪಿ ಜನರ ಮೊದಲ ಆಯ್ಕೆಯಾಗಿದೆ . ಕಳೆದ ಒಂದೂವರೆ ವರ್ಷಗಳಲ್ಲಿ, ಬಿಜೆಪಿಯ ಮೇಲಿನ ದೇಶದ ನಂಬಿಕೆ ಸ್ಥಿರವಾಗಿ ಹೆಚ್ಚಾಗಿದೆ. ಇತ್ತೀಚೆಗೆ, ಚುನಾವಣೆಗಳು ನಡೆದ ಬಿಹಾರದಲ್ಲಿ, 20 ವರ್ಷಗಳ ನಂತರವೂ, ಜನರು ಬಿಜೆಪಿಗೆ ದಾಖಲೆಯ ಸಂಖ್ಯೆಯ ಮತಗಳನ್ನು ನೀಡಿದರು. ಅದು ದಾಖಲೆಯ ಸಂಖ್ಯೆಯ ಸ್ಥಾನಗಳನ್ನು ಗೆದ್ದಿದೆ.

ಕಾಜಿರಂಗ ಕೇವಲ ರಾಷ್ಟ್ರೀಯ ಉದ್ಯಾನವಲ್ಲ, ಅದು ಅಸ್ಸಾಂನ ಆತ್ಮ ಎಂದು ಪ್ರಧಾನಿ ಮೋದಿ ಹೇಳಿದರು. ಇದು ಭಾರತದ ಜೀವವೈವಿಧ್ಯದ ಅಮೂಲ್ಯ ರತ್ನವಾಗಿದೆ. ಯುನೆಸ್ಕೋ ಇದನ್ನು ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಬೋಡೋ ಸಮುದಾಯದ ಪ್ರತಿಭಾನ್ವಿತ ಹೆಣ್ಣುಮಕ್ಕಳು ತಮ್ಮ ಬಾಗೂರುಂಬಾ ಪ್ರದರ್ಶನದೊಂದಿಗೆ ಹೊಸ ದಾಖಲೆಯನ್ನು ಸ್ಥಾಪಿಸಿದರು. ಈ ವಿಶಿಷ್ಟ ಮತ್ತು ಉತ್ಸಾಹಭರಿತ ಪ್ರದರ್ಶನದಲ್ಲಿ 10,000 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು, ಇದು ಹಾಜರಿದ್ದ ಎಲ್ಲರನ್ನೂ ಆಕರ್ಷಿಸಿತು ಎಂದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ