ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್
318 ರನ್ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್ಗಳಲ್ಲಿ 279 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿದರ್ಭ ತಂಡವು 38 ರನ್ಗಳ ಜಯ ಸಾಧಿಸಿದೆ. ವಿಶೇಷ ಎಂದರೆ ಇದು ವಿದರ್ಭ ತಂಡದ ಚೊಚ್ಚಲ ವಿಜಯ ಹಝಾರೆ ಟ್ರೋಫಿ. ಅಂದರೆ ಇದೇ ಮೊದಲ ಬಾರಿಗೆ ದೇಶೀಯ ಏಕದಿನ ಟೂರ್ನಿಯಲ್ಲಿ ವಿದರ್ಭ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.
ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು.