Video: ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ 5 ಕಾಡಾನೆಗಳು: ಕಬ್ಬು ಸೇರಿ ವಿವಿಧ ಬೆಳೆಗಳು ನಾಶ

Edited By:

Updated on: Oct 01, 2023 | 4:21 PM

Mandya News: ಐದು ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ.

ಮಂಡ್ಯ, ಅಕ್ಟೋಬರ್​ 01: ಐದು ಕಾಡಾನೆಗಳ (elephants) ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ. ಬೆಂಗಳೂರು-ಮೈಸೂರು ಹೆದ್ದಾರಿಗೂ ಕಾಡಾನೆಗಳು ಸಮೀಪದಲ್ಲಿದ್ದು, ಹೆದ್ದಾರಿ ಮತ್ತು ನಗರಕ್ಕೆ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ನಿಯಂತ್ರಿಸುತ್ತಿದ್ದಾರೆ. ಕಾಡಾನೆಗಳ ನೋಡಲು ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More