Loading video

Video: ಉತ್ತರಾಖಂಡದಲ್ಲಿ ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ

|

Updated on: Apr 07, 2025 | 9:21 AM

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಹಬ್ಬಿದೆ. ಈ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಜಿಲ್ಲೆಯ ಇಬ್ರಾಹಿಂಪುರ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದಾರೆ

ಹರಿದ್ವಾರ, ಏಪ್ರಿಲ್ 07: ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಹಬ್ಬಿದೆ. ಈ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಜಿಲ್ಲೆಯ ಇಬ್ರಾಹಿಂಪುರ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದಾರೆ. ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ತೀವ್ರತೆ ಹಾಗೂ ದಟ್ಟ ಹೊಗೆಯು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿ ಪರಿಣಮಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ