Video: ಏರ್ ಇಂಡಿಯಾ ಅಪಘಾತ: ಡಿಎನ್ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ: ಡಾ. ರಾಕೇಶ್
Air India Plane Crash: ಗುಜರಾತ್ನ ಅಹಮದಾಬಾದ್ನಲ್ಲಿ ಕಳೆದ ವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್ ಜೋಶಿ ಮಾತನಾಡಿ, ಡಿಎನ್ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ.
ಅಹಮದಾಬಾದ್, ಜೂನ್ 19: ಗುಜರಾತ್ನ ಅಹಮದಾಬಾದ್ನಲ್ಲಿ ಕಳೆದ ವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್ ಜೋಶಿ ಮಾತನಾಡಿ, ಡಿಎನ್ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ.189 ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಒಂದು ನಿಮಿಷವೂ ವ್ಯರ್ಥವಾಗದೆ ನಾವು ಕೆಲಸ ಮಾಡುತ್ತಿದ್ದೇವೆ. ಸಂಬಂಧಿಕರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 19, 2025 11:39 AM
Latest Videos