Video: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ, ವ್ಯಕ್ತಿ ಸಾವು

Updated on: Apr 04, 2025 | 7:44 AM

ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತ(Heart Attack)ದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರೇಲಿಯಲ್ಲಿ ಘಟನೆ ನಡೆದಿದೆ. ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ ಕುಸಿದು ಬಿದ್ದಿದ್ದಾರೆ. ಅತಿಥಿಗಳು ಆಘಾತಕ್ಕೊಳಗಾಗಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ, ಏಪ್ರಿಲ್ 04: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತ(Heart Attack)ದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರೇಲಿಯಲ್ಲಿ ಘಟನೆ ನಡೆದಿದೆ. ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ ಕುಸಿದು ಬಿದ್ದಿದ್ದಾರೆ. ಅತಿಥಿಗಳು ಆಘಾತಕ್ಕೊಳಗಾಗಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೃತರನ್ನು ವಾಸಿಮ್ ಸರ್ವತ್ ಎಂದು ಗುರುತಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More