Video: ಆಟಿಕೆ ಎಂದು ಭಾವಿಸಿ ಹಾವನ್ನು ಕಚ್ಚಿ ಕೊಂದ 1 ವರ್ಷದ ಮಗು
ಒಂದು ವರ್ಷದ ಮಗು ಹಾವನ್ನು ಆಟಿಕೆ ಎಂದು ಭಾವಿಸಿ ಕಚ್ಚಿ ಕೊಂದ ಘಟನೆ ಬಿಹಾರದಲ್ಲಿ ನಡೆದಿದೆ. ವೈದ್ಯರು ಮಗುವಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿ ಮಗು ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
ಬಿಹಾರ: ಒಂದು ವರ್ಷದ ಮಗು ತನ್ನ ಮನೆಯ ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಬಂದ ಮೂರು ಅಡಿ ಉದ್ದದ ಹಾವನ್ನು ಆಟಿಕೆ ಎಂದು ಭಾವಿಸಿ ಅದನ್ನು ಕಚ್ಚಿ ಕೊಂದ ಘಟನೆ ಬಿಹಾರದ ಗಯಾದ ಫತೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ. ಮಗುವಿನ ಕೈಯಲ್ಲಿ ಸತ್ತ ಹಾವನ್ನು ಕಂಡು ಪೋಷಕರು ಬೆಚ್ಚಿಬಿದ್ದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಆರೋಗ್ಯ ಸ್ಥಿತಿ ಕಂಡು ಅಚ್ಚರಿಗೊಂಡಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳು ಮಗುವಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿ ಮಗು ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಮಗು ಕಚ್ಚಿದ ಕಾರಣ ಹಾವು ಸಾವನ್ನಪ್ಪಿದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವು ವಿಷಕಾರಿಯಲ್ಲ, ಆದ್ದರಿಂದ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Video: ಪಿಸ್ತೂಲ್, ಚಾಕು ಹಿಡಿದು ಚಿನ್ನ ಕದಿಯಲು ಬಂದ ನಾಲ್ವರನ್ನು ಕೋಲಿನಿಂದ ಹೊಡೆದು ಓಡಿಸಿದ ಮಾಲೀಕ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ

