Video: ಹರಿದ್ವಾರ ಭೂಕುಸಿತ, ಬೈಕ್​​ನಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

Updated on: Aug 06, 2025 | 11:04 AM

ದೇಶದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತ, ಮೇಘಸ್ಫೋಟದಂತಹ ಘಟನೆಗಳು ಸಂಭವಿಸುತ್ತಿವೆ. ಹರಿದ್ವಾರದಲ್ಲಿ ಕೂಡ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಬೈಕ್​​ನಲ್ಲಿದ್ದ ಮೂವರು ಕೂದಲೆಳೆ ಅಂತರದಿಂದ ಪಾರಾಗಿರುವ ವಿಡಿಯೋ ವೈರಲ್ ಆಗಿದೆ. ಉತ್ತರಕಾಶಿ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟ ಘಟನೆಯಿಂದ ಹಲವಾರು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ.

ಹರಿದ್ವಾರ, ಆಗಸ್ಟ್ 06: ದೇಶದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತ, ಮೇಘಸ್ಫೋಟದಂತಹ ಘಟನೆಗಳು ಸಂಭವಿಸುತ್ತಿವೆ. ಹರಿದ್ವಾರದಲ್ಲಿ ಕೂಡ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಬೈಕ್​​ನಲ್ಲಿದ್ದ ಮೂವರು ಕೂದಲೆಳೆ ಅಂತರದಿಂದ ಪಾರಾಗಿರುವ ವಿಡಿಯೋ ವೈರಲ್ ಆಗಿದೆ. ಉತ್ತರಕಾಶಿ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟ ಘಟನೆಯಿಂದ ಹಲವಾರು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ.

ಗಂಗೋತ್ರಿ ಹೆದ್ದಾರಿ ಕೊಚ್ಚಿಹೋಗಿದೆ. ಉತ್ತರಾಖಂಡದಲ್ಲಿ ದುರಂತಗಳು ಸುಳಿದಾಡುತ್ತಿದ್ದಂತೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದೆ. ಹರಿದ್ವಾರದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಇದು ಸೆರೆಯಾಗಿದೆ. ಮೂವರು ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

19 ಸೆಕೆಂಡುಗಳ ಕ್ಲಿಪ್‌ನಲ್ಲಿ ಟ್ರಕ್ ಹಾದುಹೋದ ನಂತರ ಮಳೆಯಿಂದ ನೆನೆದ ರಸ್ತೆಯಲ್ಲಿ ಬೃಹತ್ ಅವಶೇಷಗಳು ಬೀಳುತ್ತಿರುವುದನ್ನು ಕಾಣಬಹುದು. ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ, ವ್ಯಾಪಕ ನಾಶನಷ್ಟ ಸಂಭವಿಸಿ, ನಾಲ್ಕು ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 06, 2025 11:03 AM