ವಿಡಿಯೋ: ಜಗಳೂರು ಪಟ್ಟಣದಲ್ಲಿ ಕುಡಿತ ಬಿಡಿಸಲು ನಡೆದ ಮದ್ಯವರ್ಜನ ಶಿಬಿರದಲ್ಲಿ ಶಾಸಕ ಬಿ. ದೇವೇಂದ್ರಪ್ಪ ಏನು ಮಾಡಿದರು ನೋಡಿ!

Edited By:

Updated on: Jul 31, 2023 | 11:00 AM

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯವರ್ಜನ ಶಿಬಿರ ಆಯೋಜಿಸಲಾಗಿತ್ತು. ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ, ಬಳಿಕ ಕೆಲ ಹೊತ್ತು ಜಾನಪದ ಕಲಾವಿದರ ಜೊತೆ ಭಜನೆ ಮಾಡಿದರು.

ಭಾನುವಾರ ಬಂದರೆ ಸಾಕು ಶಾಸಕ ಬಿ. ದೇವೇಂದ್ರಪ್ಪ (Jagaluru Congress MLA B. Devendrappa) ತಮ್ಮ ಸ್ವಕ್ಷೇತ್ರದಲ್ಲಿ ಏನಾದರೊಂದು ಜನಪರ ಕಾರ್ಯಕ್ರಮದಲ್ಲಿ ತನ್ಮಯರಾಗಿ ಪಾಲ್ಗೊಳ್ಳುತ್ತಾರೆ. ಅದು ಅಧಿಕಾರಯುತವಾಗಿ ಸರ್ಕಾರಿ ಜವಾಬ್ದಾರಿಯನ್ನಷ್ಟೇ ನಿಭಾಯಿಸಬೇಕು ಅಂತಲ್ಲ. ಯಾವುದೇ ಜನಪತರ ಕಾಳಜಿಯುಳ್ಳ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಶಾಸಕನಾಗಿ ತಮ್ಮ ಸಾಮಾಜಿಕ ಕಳಕಳಿ ಏನೆಂಬುದನ್ನು ತೋರಿಸಿಕೊಡುತ್ತಾರೆ.

ಇತ್ತೀಚಿಗೆ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಕುಡಿತ ಬಿಡಿಸಲು ಹತ್ತಾರು ಕಾರ್ಯಕ್ರಮಗಳು ನಡೆಯುತ್ತಿವೆ. ಇದೇ ರೀತಿ ಮದ್ಯವರ್ಜನ ಶಿಬಿರವೊಂದು (De addiction of Alcoholism camp) ಜಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಜನೆ ಮಾಡಿದ (Bhajans) ಸ್ಥಳೀಯ ಕಾಂಗ್ರೆಸ್​​ ಶಾಸಕ ಬಿ. ದೇವೇಂದ್ರಪ್ಪ ಕೆಲ ಹೊತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಜಗಳೂರು ಪಟ್ಟಣದ ಡಾ. ಬಿ ಆರ್​​ ಅಂಬೇಡ್ಕರ್​ ಭವನದಲ್ಲಿ ನಡೆದ ಮದ್ಯ ವರ್ಜನ ಶಿಬಿರ ಇದಾಗಿತ್ತು.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯವರ್ಜನ ಶಿಬಿರ ಆಯೋಜಿಸಲಾಗಿತ್ತು. ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ, ಬಳಿಕ ಕೆಲ ಹೊತ್ತು ಜಾನಪದ ಕಲಾವಿದರ ಜೊತೆ ಭಜನೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2023 10:53 AM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More