Dwarakish Death: ಹೆಂಡತಿ ಸತ್ತ ದಿನವೇ ಬದುಕು ಮುಗಿಸಿದ ದ್ವಾರಕೀಶ್
"ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ ಎಂದು ದ್ವಾರಕೀಶ್ ಮಗ ಯೋಗೀಶ್ ಹೇಳಿಕೆ ನೀಡಿದ್ದಾರೆ.
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏ 16) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.’ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’. ಇದಲ್ಲದೇ “ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Dwarakish Death: ಸಿನಿಮಾದಲ್ಲಿ ಲಕ್ಷ ಲಕ್ಷ ಗಳಿಸಿದರೂ ದ್ವಾರಕೀಶ್ ಮನೆ ಮಾರಾಟ ಮಾಡಿದ್ದೇಕೆ? ಇಲ್ಲಿದೆ ಸತ್ಯ ಕಥೆ