Video: ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

Updated on: Jan 06, 2025 | 10:07 AM

ಯುವಕನೊಬ್ಬ ನಡುರಸ್ತೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಹಾಡಹಗಲೇ ತನ್ನ ಸ್ಕೂಟರ್​ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ದುಪಟ್ಟಾ ಸುತ್ತಿ ಕೆಳಗೆ ಬೀಳಿಸಿ ಹತ್ಯೆ ಮಾಡಲು ಯತ್ನಿಸಿದ್ದ, ದಾರಿಯಲ್ಲಿ ಹೋಗುವವರು ಕೂಡಲೇ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ. ಸಲಾಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾಹುಲ್ ಸ್ಥಳೀಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.

ಯುವಕನೊಬ್ಬ ನಡುರಸ್ತೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಹಾಡಹಗಲೇ ತನ್ನ ಸ್ಕೂಟರ್​ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ದುಪಟ್ಟಾ ಸುತ್ತಿ ಕೆಳಗೆ ಬೀಳಿಸಿ ಹತ್ಯೆ ಮಾಡಲು ಯತ್ನಿಸಿದ್ದ, ದಾರಿಯಲ್ಲಿ ಹೋಗುವವರು ಕೂಡಲೇ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ.
ಸಲಾಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾಹುಲ್ ಸ್ಥಳೀಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.

ಆತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ, ಆದರೆ ಆಕೆಗೆ ಇಷ್ಟವಿರಲಿಲ್ಲ, ಆಕೆ ಬೇರೊಬ್ಬ ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಕೋಪಗೊಂಡ ಆತ ಆಕೆಯನ್ನು ಹತ್ಯೆ ಮಾಡಲು ಯತ್ನಿಸಿದ್ದಾನೆ. ಮೊದಲು ಆಕೆಯೊಂದಿಗೆ ಮಾತನಾಡಲು ಪ್ರಯತ್ನಿಸಿದ್ದ. ನಂತರ ಇದ್ದಕ್ಕಿದ್ದಂತೆ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲು ಮುಂದಾಗಿದ್ದ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More