Video: ಮೋದಿ ಅವರನ್ನು ಆಯ್ಕೆ ಮಾಡಿದ್ರೆ ಉಳಿತೀರಿ, ಇಲ್ಲಾಂದ್ರೆ ಉಳಿಯಲ್ಲ: ಮಹಾಲಿಂಗೇಶ್ವರ ಸ್ವಾಮೀಜಿ ಜಟ ಭವಿಷ್ಯ ವೈರಲ್

Edited By:

Updated on: Oct 16, 2023 | 7:34 PM

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಿಸಿ ತಂದರೆ ಉಳಿತೀರಿ, ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ. ಇದರ‌ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ ಎಂದು ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ ಮಠದ ಸ್ವಾಮೀಜಿ ಹೇಳಿದ ಜಟ ಭವಿಷ್ಯ ಹೇಳಿದ್ದಾರೆ.

ಬಾಗಲಕೋಟೆ, ಅಕ್ಟೋಬರ್​​​ 16: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಿಸಿ ತಂದರೆ ಉಳಿತೀರಿ, ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ. ಇದರ‌ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ ಎಂದು ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ (mahalingeshwar swamiji) ಮಠದ ಸ್ವಾಮೀಜಿ ಹೇಳಿದ ಜಟ ಭವಿಷ್ಯ ಹೇಳಿದ್ದಾರೆ. ನವರಾತ್ರಿ ದೀಪೋತ್ಸವ ವೇಳೆ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು  ಕೈಯಲ್ಲಿ ಜಟ ಹಿಡಿದು ಜಟವಾಣಿ ನುಡಿದಿದ್ದಾರೆ. ಸದ್ಯ ಈ ಭವಿಷ್ಯ ವಾಣಿ ಸಾಕಷ್ಟು ವೈರಲ್​ ಆಗಿದೆ. ಮೂಲ ಮಹಾಲಿಂಗೇಶ್ವರ ಸ್ವಾಮೀಜಿ ಅವರ ಜಟ(ಕೂದಲು) ಆಗಿದ್ದು, ಪ್ರತಿ ವರ್ಷ ಜಟ ಬೆಳೆಯುತ್ತದೆ ಎಂಬ ನಂಬಿಕೆ ಇದೆ. ಜಟ ಹಿಡಿದು ಹೇಳುವ ಭವಿಷ್ಯ ನಿಜವಾಗುತ್ತದೆ ಎಂಬ ನಂಬಿಕೆ ಭಕ್ತರದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Oct 16, 2023 06:24 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More