ವಿಡಿಯೋ: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ವ್ಯಕ್ತಿ: ಅದೃಷ್ಟವಶಾತ್​ ಪಾರು

Edited By:

Updated on: Aug 17, 2024 | 2:57 PM

ಗದಗ ಜಿಲ್ಲೆಯ ರೋಣ ತಾಲೂಕಿನ ದ್ಯಾಮುಣಸಿ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ದಾಟಲು ಹೋಗಿ ವ್ಯಕ್ತಿ ಓರ್ವ ಕೊಚ್ಚಿ ಹೋಗಿದ್ದು, ಪವಾಡ ಸದೃಶ್ಯವೆಂಬಂತೆ ಬಚಾವ್​ ಆಗಿರುವಂತಹ ಘಟನೆ ನಡೆದಿದೆ. ವ್ಯಕ್ತಿ ಕೊಚ್ಚಿ ಹೋಗುತ್ತಿದ್ದ ವಿಡಿಯೋ ನೋಡಿದರೆ ಒಂದು ಕ್ಷಣ ಮೈ ಜುಮ್​ ಎನ್ನಿಸುತ್ತದೆ.

ಗದಗ, ಆಗಸ್ಟ್​ 17: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿ (Man) ಓರ್ವ ಕೊಚ್ಚಿ ಹೋಗಿದ್ದು, ಪವಾಡ ಸದೃಶ್ಯವೆಂಬಂತೆ ಬಚಾವ್ ಆಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ದ್ಯಾಮುಣಸಿ ಗ್ರಾಮದಲ್ಲಿ ಘಟನೆ ನಡೆದಿದೆ. ವ್ಯಕ್ತಿ ಕೊಚ್ಚಿ ಹೋಗುತ್ತಿದ್ದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಯಲ್ಲಪ್ಪ ಮಾರನಬಸರಿ (50) ಪ್ರಾಣಾಪಾಯದಿಂದ ಪಾರಾಗಿರುವ ವ್ಯಕ್ತಿ. ರೋಣ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆ ಸುರಿದಿದೆ. ಪರಿಣಾಮ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಈ ವೇಳೆ ಯಲ್ಲಪ್ಪ ಮಾರನಬಸರಿ ಹಳ್ಳ ದಾಟಲು ಹೋಗಿದ್ದಾರೆ. ಆಗ ಅನಾಹುತ ನಡೆದಿದೆ. ಇತ್ತ ಯಲ್ಲಪ್ಪ ಮಾರನಬಸರಿ ಕೊಚ್ಚಿ ಹೋಗುತ್ತಿದ್ದಂತೆ ಹಳ್ಳದ ದಡದಲ್ಲಿ ಇದ್ದ ಗ್ರಾಮಸ್ಥರಿಂದ ರಕ್ಷಣೆ ಮಾಡಿ ಟ್ರ್ಯಾಕ್ಟರ್ ಮೂಲಕ ದಡಕ್ಕೆ ಕರೆದುಕೊಂಡು ಬಂದಿದ್ದಾರೆ. ವ್ಯಕ್ತಿ ಕೊಚ್ಚಿ ಹೋಗುತ್ತಿದ್ದ ವಿಡಿಯೋ ನೋಡಿದರೆ ಮೈ ಜುಮ್​ ಎನ್ನಿಸುತ್ತದೆ. ಸೇತುವೆ ಮೇಲ್ದರ್ಜೆಗೆ ಏರಿಸುವಂತೆ ಗ್ರಾಮಸ್ಥರಿಂದ ಒತ್ತಾಯಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More