Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು

Video: ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು

ನಯನಾ ರಾಜೀವ್
|

Updated on:Nov 25, 2024 | 11:57 AM

ಪಾರ್ಕಿಂಗ್ ವಿಚಾರವಾಗಿ ನಡೆದ ವಿವಾದದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಬರ್ಬರವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಹರಿ ಮಂದಿರ ಚೌಕ್ ಬಳಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ನಡೆದ ಗಲಾಟೆಯು ಹಿಂಸಾತ್ಮಕ ರೂಪ ತಳೆದಿತ್ತು.

ಪಾರ್ಕಿಂಗ್ ವಿಚಾರವಾಗಿ ನಡೆದ ವಿವಾದದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಬರ್ಬರವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಹರಿ ಮಂದಿರ ಚೌಕ್ ಬಳಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ನಡೆದ ಗಲಾಟೆಯು ಹಿಂಸಾತ್ಮಕ ರೂಪ ತಳೆದಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನೀಲಿ ಬಣ್ಣದ ಡೆನಿಮ್ ಜಾಕೆಟ್‌ನಲ್ಲಿದ್ದ ಯುವಕನನ್ನು ಕನಿಷ್ಠ ಆರು ಜನರು ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ. ಕಳೆದ ವಾರವಷ್ಟೇ ಶಂಕರ್ ವಿಹಾರ್​ನಲ್ಲಿ ಪಾರ್ಕಿಂಗ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹಾಗೂ ಆತನ ಮಗನಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 25, 2024 11:57 AM