Video: ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದಿರುವ ಘಟನೆ ಹರ್ಯಾಣದ ಕೈತಾಲ್ನಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 4 ರಂದು ಘಟನೆ ನಡೆದಿದೆ. ಐವರು ವ್ಯಾಪಾರಿಗಳ ಗುಂಪು ರಸ್ತೆಯ ಪಕ್ಕದಲ್ಲಿ ಕುಳಿತಿದ್ದಾಗ ಈಗಷ್ಟೇ ಕಾರು ಚಾಲನೆ ಕಲಿಯುತ್ತಿದ್ದ ವ್ಯಕ್ತಿ ನಿಯಂತ್ರಣ ಕಳೆದುಕೊಂಡು ಐವರ ಮೇಲೆ ಕಾರು ಹತ್ತಿಸಿದ್ದಾನೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದಿರುವ ಘಟನೆ ಹರ್ಯಾಣದ ಕೈತಾಲ್ನಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 4 ರಂದು ಘಟನೆ ನಡೆದಿದೆ.
ಐವರು ವ್ಯಾಪಾರಿಗಳ ಗುಂಪು ರಸ್ತೆಯ ಪಕ್ಕದಲ್ಲಿ ಕುಳಿತಿದ್ದಾಗ ಈಗಷ್ಟೇ ಕಾರು ಚಾಲನೆ ಕಲಿಯುತ್ತಿದ್ದ ವ್ಯಕ್ತಿ ನಿಯಂತ್ರಣ ಕಳೆದುಕೊಂಡು ಐವರ ಮೇಲೆ ಕಾರು ಹತ್ತಿಸಿದ್ದಾನೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾರಿಗೆ ಡಿಕ್ಕಿ ಹೊಡೆದವರಲ್ಲಿ ಮೂವರು ತಕ್ಷಣ ಮೇಲೆದ್ದರೆ, ಉಳಿದ ಇಬ್ಬರನ್ನು ಸ್ವಲ್ಪ ದೂರದವರೆಗೆ ಕಾರು ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರು ಚಾಲಕನನ್ನು ಹಿಡಿದಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos