Video: ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

Updated on: Jan 06, 2025 | 10:43 AM

ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದಿರುವ ಘಟನೆ ಹರ್ಯಾಣದ ಕೈತಾಲ್​ನಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 4 ರಂದು ಘಟನೆ ನಡೆದಿದೆ. ಐವರು ವ್ಯಾಪಾರಿಗಳ ಗುಂಪು ರಸ್ತೆಯ ಪಕ್ಕದಲ್ಲಿ ಕುಳಿತಿದ್ದಾಗ ಈಗಷ್ಟೇ ಕಾರು ಚಾಲನೆ ಕಲಿಯುತ್ತಿದ್ದ ವ್ಯಕ್ತಿ ನಿಯಂತ್ರಣ ಕಳೆದುಕೊಂಡು ಐವರ ಮೇಲೆ ಕಾರು ಹತ್ತಿಸಿದ್ದಾನೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದಿರುವ ಘಟನೆ ಹರ್ಯಾಣದ ಕೈತಾಲ್​ನಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 4 ರಂದು ಘಟನೆ ನಡೆದಿದೆ.

ಐವರು ವ್ಯಾಪಾರಿಗಳ ಗುಂಪು ರಸ್ತೆಯ ಪಕ್ಕದಲ್ಲಿ ಕುಳಿತಿದ್ದಾಗ ಈಗಷ್ಟೇ ಕಾರು ಚಾಲನೆ ಕಲಿಯುತ್ತಿದ್ದ ವ್ಯಕ್ತಿ ನಿಯಂತ್ರಣ ಕಳೆದುಕೊಂಡು ಐವರ ಮೇಲೆ ಕಾರು ಹತ್ತಿಸಿದ್ದಾನೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾರಿಗೆ ಡಿಕ್ಕಿ ಹೊಡೆದವರಲ್ಲಿ ಮೂವರು ತಕ್ಷಣ ಮೇಲೆದ್ದರೆ, ಉಳಿದ ಇಬ್ಬರನ್ನು ಸ್ವಲ್ಪ ದೂರದವರೆಗೆ ಕಾರು ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರು ಚಾಲಕನನ್ನು ಹಿಡಿದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More