Video: ಗುಜರಾತ್​ನ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ

Updated on: Sep 14, 2025 | 12:33 PM

ಗುಜರಾತ್​ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.ದೂರದಿಂದಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಗೋಚರಿಸುತ್ತಿದ್ದು, ಕೈಗಾರಿಕಾ ಪ್ರದೇಶದಲ್ಲಿ ಭೀತಿ ಸೃಷ್ಟಿಯಾಗಿದೆ.ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಭರೂಚ್, ಸೆಪ್ಟೆಂಬರ್ 14: ಗುಜರಾತ್​ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.ದೂರದಿಂದಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಗೋಚರಿಸುತ್ತಿದ್ದು, ಕೈಗಾರಿಕಾ ಪ್ರದೇಶದಲ್ಲಿ ಭೀತಿ ಸೃಷ್ಟಿಯಾಗಿದೆ.ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More