Video: ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ

Updated on: Feb 12, 2025 | 2:58 PM

ದೇವಾಲಯವೊಂದರ ಗರ್ಭಗುಡಿಯಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ದೇವಾಲಯದ ಆವರಣದಲ್ಲಿ ಉದ್ವಿಗ್ನತೆ ಉಮಟಾಗಿದೆ. ದೇವಾಲಯದ ಆವರಣದಲ್ಲಿದ್ದ ಭಕ್ತರು ಘಟನೆಯ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಟಪ್ಪಾಚಬುತ್ರ ಪ್ರದೇಶದ ಜೀರಾ ಹನುಮಾನ್ ದೇವಾಲಯದ ಅಧಿಕಾರಿಗಳ ಪ್ರಕಾರ, ಅರ್ಚಕರು ಮಾಂಸದ ತುಂಡುಗಳನ್ನು ನೋಡಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿದರು. ಸುದ್ದಿ ಹರಡಿದ ತಕ್ಷಣ, ದೇವಾಲಯದ ಹೊರಗೆ ಜನಸಮೂಹ ಜಮಾಯಿಸಿತು.

ದೇವಾಲಯವೊಂದರ ಗರ್ಭಗುಡಿಯಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ದೇವಾಲಯದ ಆವರಣದಲ್ಲಿ ಉದ್ವಿಗ್ನತೆ ಉಮಟಾಗಿದೆ. ದೇವಾಲಯದ ಆವರಣದಲ್ಲಿದ್ದ ಭಕ್ತರು ಘಟನೆಯ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಟಪ್ಪಾಚಬುತ್ರ ಪ್ರದೇಶದ ಜೀರಾ ಹನುಮಾನ್ ದೇವಾಲಯದ ಅಧಿಕಾರಿಗಳ ಪ್ರಕಾರ, ಅರ್ಚಕರು ಮಾಂಸದ ತುಂಡುಗಳನ್ನು ನೋಡಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿದರು. ಸುದ್ದಿ ಹರಡಿದ ತಕ್ಷಣ, ದೇವಾಲಯದ ಹೊರಗೆ ಜನಸಮೂಹ ಜಮಾಯಿಸಿತು.
ಬುಧವಾರ ಬೆಳಿಗ್ಗೆ ದೇವಾಲಯದ ಅರ್ಚಕರು ದೇವಸ್ಥಾನಕ್ಕೆ ಬಂದಾಗ, ಶಿವಲಿಂಗದ ಹಿಂದೆ ಮಾಂಸವನ್ನು ಇಟ್ಟಿರುವುದು ಕಂಡುಬಂದಿದೆ.

ಅದು ಹನುಮಾನ್ ಮಂದಿರವಾಗಿದ್ದು ಹಲವು ದೇವರುಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಸುದ್ದಿ ಹರಡುತ್ತಿದ್ದಂತೆ, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ದೇವಾಲಯದಲ್ಲಿ ಜಮಾಯಿಸಿದರು.

ದೇವಾಲಯದಲ್ಲಿ ಮಾಂಸ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಡಿಸಿಪಿ ಚಂದ್ರ ಮೋಹನ್ ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾವು ಸ್ಥಳಕ್ಕೆ ತಲುಪಿದಾಗ, ದೇವಾಲಯದ ಬಾಗಿಲುಗಳು ಮುಚ್ಚಿರುವುದನ್ನು ಕಂಡೆವು. ಯಾವುದೋ ಪ್ರಾಣಿ ಮಾಂಸವನ್ನು ಒಳಗೆ ತಂದಿರಬಹುದು ಎಂದು ನಾವು ಅನುಮಾನಿಸುತ್ತೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More